ನಮಸ್ಕಾರ ಎಲ್ಲರಿಗೂ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗಮೇಳ ಜೂನ್ 7 ಮತ್ತು 8ರಂದು ಮೂಡಬಿದಿರೆಯ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳ ದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ನಿರೀಕ್ಷಿಸಬಹುದು ಮತ್ತು ಈ ಉದ್ಯೋಗ ಮೇಳವು ಬಹಳಷ್ಟು ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದ್ದು ನೀವೇನಾದ್ರು ಒಳ್ಳೆಯ ಉದ್ಯೋಗ ನಿರೀಕ್ಷೆಯಲ್ಲಿದ್ದಾರೆ ನೀವು ಕೂಡ ಜೂನ್ 7 ಮತ್ತು 8 ರಂದು ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು ಮತ್ತು ದೂರದಿಂದ ಬರುವಂತ ಆಕಾಂಕ್ಷಿಗಳಿಗೆ ವಸತಿ ಸೌಲಭ್ಯವು ಇರುತ್ತದೆ.
ALVAS ಉದ್ಯೋಗ ಮೇಳ 2024
ಮೂಡುಬಿದಿರೆ: ಆಳ್ವಾಸ್ ಪ್ರಗತಿ – 2024 ಜೂನ್ 7 ಮತ್ತು 8 ರಂದು 2024 ರಂದು ನಡೆಯಲಿದೆ. ಸುಮಾರು 200 ಕಂಪನಿಗಳು ಈವೆಂಟ್‌ನಲ್ಲಿ ಭಾಗವಹಿಸಲು ಆಸಕ್ತಿ ತೋರಿಸಿವೆ. ಅಭ್ಯರ್ಥಿಗಳ ಆಯಾ ಕಾಲೇಜುಗಳಿಂದ ಬೆಂಬಲವನ್ನು ಮುಂಚಿತವಾಗಿ ಸ್ವೀಕರಿಸಲಾಗುವುದು ಮತ್ತು ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಭೆಗಳನ್ನು ಸುಗಮ ಸಹಯೋಗಕ್ಕಾಗಿ ಯೋಜಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ (ಇಡಿಎಫ್) ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಅವರು ಪ್ರೆಸ್ ಕ್ಲಬ್ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿರುವ ಮೇಳದಲ್ಲಿ ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಒಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ನೇಮಕಾತಿ ನಡೆಸಲಿವೆ.
ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್ www.alvaspragati.comನಲ್ಲಿ ಪ್ರಕಟಿಸಲಾಗಿದೆ. ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ಅಲ್ಲದೇ ಆಳ್ವಾಸ್ ಸಂಸ್ಥೆಯ ಪರಿಣತ ತಂಡದಿಂದ ‘ಆಳ್ವಾಸ್ ಪ್ರಗತಿ’ಯಲ್ಲಿ ಉದ್ಯೋಗ ನೀಡುವ ಕಂಪೆನಿಗಳ ಮಾಹಿತಿ, ಸಂದರ್ಶನಾ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ನೀಡಲಾಗುತ್ತದೆ.
200ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಮುಂಚಿತವಾಗಿ ತಿಳಿಸಿ, ಅಲ್ಲಿನ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುತ್ತಿದೆ.
ಇದನ್ನು ಸಹ ಓದಿ: ICF ITI ನೇಮಕಾತಿ 2024. SSLC ಮತ್ತು ITI ಆಗಿರುವ ಅಭ್ಯರ್ಥಿಗಳಿಗೆ ಭರ್ಜರಿ 1010 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸುವರ್ಣವಕಾಶ ಮಿಸ್ ಮಾಡದೇ ಅರ್ಜಿ ಸಲ್ಲಸಿ.
ALVAS ಉತ್ತಮ ಉದ್ಯೋಗಾವಕಾಶಗಳ ಮಹಾಪೂರ:
ಆಳ್ವಾಸ್ ಪ್ರಗತಿಗೆ ಈವರೆಗೆ 60 ಕಂಪೆನಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 137 ಕಂಪೆನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂಬಿಎ, ಎಂ.ಕಾಂ, ಬಿ.ಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಗೆ ಹೈದರಾಬಾದ್‌ನ ಫ್ಯಾಕ್ಟ್ಸೆಟ್ ಸಂಸ್ಥೆ, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಉದ್ಯೋಗಾವಕಾಶಗಳನ್ನು ನೀಡುವ ನಿರೀಕ್ಷೆ ಇದೆ.
ಉತ್ಪಾದನಾ ವಲಯ:- ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪೆನಿಗಳು ಭಾಗವಹಿಸಲಿವೆ. ಐಟಿ ವಲಯದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ದಿಯಾ ಸಿಸ್ಟಮ್ಸ್, 24*7ಎಐ, ಕಾನ್ಸೆಂಟ್ರಿಕ್ಸ್, ವಿನ್‌ಮ್ಯಾನ್ ಸಾಫ್ಟ್ವೇರ್ ಕಂಪೆನಿಗಳು ಯಾವುದೇ ಹಿನ್ನಲೆಯ ಪದವೀಧರರನ್ನು ನೇಮಿಸಿಕೊಳ್ಳಲಿವೆ.
ಮಾರಾಟ ವಲಯ:- ಕಲ್ಟ್ಫಿಟ್, ಐಟಿಸಿ ಲಿಮಿಟೆಡ್, ಬ್ಲೂಸ್ಟೋನ್ ಜ್ಯುವೆಲ್ಲರಿಗಳು ಪದವೀಧರರಿಗೆ ಉದ್ಯೋಗ ನೀಡಲಿವೆ. ಅಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬುಹ್ಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನೆಕ್ಸ್ಟೀರ್ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಂಡರ್ಲಾ ಹಾಲಿಡೇಸ್‌ನಂತಹ ಕಂಪೆನಿಗಳು ಮೆಕ್ಯಾನಿಕಲ್ ಇಂಜಿನಿಯರ್‌ಗಳಿಗೆ 50ಕ್ಕೂ ಹೆಚ್ಚಿನ ಉದ್ಯೋಗಾವಕಾಶ ನೀಡಲಿವೆ. ವೋಲ್ವೋಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಹಿಳಾ ಮೆಕ್ಯಾನಿಕಲ್ ಪದವೀಧರರಿಗೆ ಉದ್ಯೋಗ ನೀಡಲಿದೆ.
ಆ್ಯಂಥಮ್ ಬಯೋ, ಹೈದರಾಬಾದ್‌ನ ಎಂಎಸ್‌ಎನ್ ಲ್ಯಾಬೋರೇಟರೀಸ್ ಹಾಗೂ ಹಿಟಿರೋ ಲ್ಯಾಬ್ಸ್ ಎಂಎಸ್ಸಿ ಹಾಗೂ ಬಿಎಸ್ಸಿ ಪದವೀಧರರಿಗೆ ಉದ್ಯೋಗ ಕಲ್ಪಿಸಲಿವೆ. ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್, ಏರೋಸ್ಪೇಸ್ ಡಿವಿಶನ್, ಸೆರಾಟಿಜಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ ಪ್ರೈ ಲಿಮಿಟೆಡ್, ವೋಲ್ವೋ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸುಂದರಂ ಆಟೋ ಕಾಂಪೊನೆಂಟ್ಸ್ ಲಿಮಿಟೆಡ್, ಹಿಮಾಲಯ ವೆಲ್ನೆಸ್, ಮಾಂಡೋವಿ ಮೋಟಾರ್ಸ್, ಪ್ರಥಮ್ ಮೋಟಾರ್ಸ್, ಅರವಿಂದ್ ಮೋಟಾರ್ಸ್, ಸುಪ್ರೀಮ್ ಆಟೋ ಮತ್ತು ಇನ್ನೂ ಅನೇಕ ಕಂಪೆನಿಗಳು ಐಟಿಐ ಹಾಗೂ ಡಿಪ್ಲೊಮೋ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಿವೆ. ನರ್ಸಿಂಗ್ ಪದವೀಧರ ಅಭ್ಯರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಾದ ಹಿರಾನಂದನಿ ಆಸ್ಪತ್ರೆ, ಮುಂಬೈಯ ಅಪೊಲೊ ಆಸ್ಪತ್ರೆ, ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ.
ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9008907716, 9663190590, 7975223865, 9741440490 ಸಂಪರ್ಕಿಸಬಹುದು. ಅಭ್ಯರ್ಥಿಗಳ ನೋಂದಾವಣೆ ಹಾಗೂ ಉದ್ಯೋಗ ನೀಡಲಿರುವ ಕಂಪೆನಿಗಳ ಮಾಹಿತಿಗೆ www.alvaspragati.com ಭೇಟಿ ನೀಡಬಹುದು.
ಕಂಪೆನಿಗಳ ನೋಂದಾವಣೆ ಹಾಗೂ ಇತರ ಮಾಹಿತಿಗೆ: 8971250414 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು.
ಇದನ್ನು ಸಹ ಓದಿ: BPNL ನೇಮಕಾತಿ 2024. ಭಾರತೀಯ ಪಶುಪಾಲನಾ ನಿಗಮದ ಹೊಸ ನೇಮಕಾತಿ 5250 ಹುದ್ದೆಗಳಿಗೆ SSLC, PUC ಆಗಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ.
ALVAS ಉದ್ಯೋಗ ಮೇಳ ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲಾತಿಗಳು:
- 5-10 ಪಾಸ್‌ಪೋರ್ಟ್ ಭಾವಚಿತ್ರ
- ಸಂಪೂರ್ಣ ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮ್
- ಅಂಕ ಪಟ್ಟಿಗಳು (ನೆರಳಚ್ಚು ಪ್ರತಿಗಳು)
- ಆನ್‌ಲೈನ್ ರಿಜಿಸ್ಟ್ರೇಶನ್ ನಂಬರ್/ಐಡಿ
- ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಿಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು ಎಂದು ತಿಳಿಸಲಾಗಿದೆ.
ALVAS ‘ಆಳ್ವಾಸ್ ಪ್ರಗತಿ’ ಎಂಬುದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2007ರಿಂದ ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳ. ಸಂಸ್ಥೆ ಈವರೆಗೆ 20 ಬೃಹತ್ ಉದ್ಯೋಗ ಮೇಳಗಳನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಬಂದಿದೆ. ಸರ್ಕಾರ ಮತ್ತು ಸಾಮಾಜಿಕ ಸಂಸ್ಥೆಗಳ ಸಹಯೋಗದೊಂದಿಗೆ ಚಿಕ್ಕಬಳ್ಳಾಪುರ, ಮಂಗಳೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಇದಕ್ಕಾಗಿ ಈವರೆಗೆ ಸುಮಾರು 5 ಕೋಟಿ ರೂ.ಗಳಷ್ಟು ಹಣ ವ್ಯಯಿಸಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಹೆಚ್ಚಿನ ಲಾಭ ಪಡೆದಿದ್ದಾರೆ. ಒಟ್ಟು 1,60,000 ಆಕಾಂಕ್ಷಿಗಳು ಈವರೆಗಿನ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರೆ, 55,564 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ ಲಿಸ್ಟ್ ಆಗಿದ್ದಾರೆ. ಪ್ರತೀ ಉದ್ಯೋಗ ಮೇಳದಲ್ಲಿ ಸುಮಾರು 200ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿಯವರೆಗೆ ಒಟ್ಟು 31,896 ಉದ್ಯೋಗಗಳನ್ನು ನೀಡಿವೆ ಎಂದು ವಿವೇಕ್ ಆಳ್ವ ಮಾಹಿತಿ ನೀಡಿದರು
I am a web developer and blogger, YouTube creator working since 2021. We are going to provide accurate job information for our audience through this jobskannada.com website You can contact us through our email.